ಅಯೋಧ್ಯಾ: ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸದಿದ್ದರೆ ಅ.1ರಂದು ಸಂತರ ಧಾರ್ಮಿಕ ಸಮ್ಮೇಳನ ಆಯೋಜಿಸಿ, ಅ.2ರಂದು ಜಲಸಮಾಧಿಯಾಗುವುದಾಗಿ ತಪಸ್ವಿ ಛಾವಣಿಯ ಉತ್ತರಾಧಿಕಾರಿ ಮಹಂತ್ ಪರಮಹಂಸ್ ದಾಸ್ ಹೇಳಿದ್ದಾರೆ.
'ದೇಶದ ನಾಗರಿಕರನ್ನು ರಕ್ಷಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವುದು ಬಹಳ ಮುಖ್ಯ. ಇನ್ನು ನಾನು ಸಂತರ ಸಂಪ್ರದಾಯವನ್ನು ಅನುಸರಿಸಿದ್ದೇನೆ. ಸಾವಿನ ನಂತರ ಮಾಡಬೇಕಾದ ಕ್ರಿಯೆಗಳನ್ನು ಮೊದಲೇ ಮಾಡಿ ಮುಗಿಸಿದ್ದೇನೆ. ವೇದ ಮಂತ್ರಗಳ ಮೂಲಕ ನಾನು ಧರಿಸಿರುವ ಕವಚವನ್ನು ಶುದ್ಧೀಕರಿಸಿದ್ದೇನೆ. ಈ ಕವಚವನ್ನು ನನ್ನ ಮೇಲೆ ಹಾಕಿಕೊಂಡು, ನಾನು ಅಕ್ಟೋಬರ್ 2 ರಂದು ಜಲ ಸಮಾಧಿಯಾಗುತ್ತೇನೆ" ಎಂದು ಹೇಳಿದ್ದಾರೆ.