ಹೈದರಾಬಾದ್, ತೆಲಂಗಾಣ: ತೆಲಂಗಾಣ ವಿಧಾನಸಭೆ ಚುನಾವಣೆ ರಂಗೇರುತ್ತಿದೆ. ಮುಂದಿನ ತಿಂಗಳು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರೂ ಇದೆ.
ಪಕ್ಷ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯ ಪ್ರಕಾರ ಅಜರುದ್ದೀನ್ ಅವರನ್ನು ಹೈದರಾಬಾದ್ ನಗರದ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಸದ್ಯ ಅವರು ಉತ್ತರ ಪ್ರದೇಶದ ಮೊರಾದಾಬಾದ್ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಕಾಂಗ್ರೆಸ್ನ ಎರಡನೇ ಪಟ್ಟಿಯಲ್ಲಿ ಆರು ಎಸ್ಟಿಗಳಿಗೆ ಸ್ಥಾನ ನೀಡಲಾಗಿದ್ದು, ಮೂವರು ಎಸ್ಸಿಗಳಿಗೆ ಟಿಕೆಟ್ ಕೊಡಲಾಗಿದೆ.
ತೆಲಂಗಾಣ ವಿಧಾನಸಭಾ ಚುನಾವಣೆಗೆ ಜುಬಿಲಿ ಹಿಲ್ಸ್ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಜೀ, ಸೋನಿಯಾ ಮೇಡಂ, ಪ್ರಿಯಾಂಕಾ ಗಾಂಧಿ ಮೇಡಂ, ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನು ಕೃತಜ್ಞನಾಗಿದ್ದೇನೆ. ಜುಬಿಲಿ ಹಿಲ್ಸ್‌ನಿಂದ ಕಣಕ್ಕಿಳಿಯುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ. ದೇವರ ಆಶೀರ್ವಾದದಿಂದ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೇಳಿದ್ದಾರೆ.