ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ದೆಹಲಿಯ 'ಬಾಬಾ ಕಾ ಡಾಬಾ'ದ ಮಾಲೀಕ ಕಾಂತಾ ಪ್ರಸಾದ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸ್ಟಾರ್ ಆಗಿದ್ದ ಬಾಬಾ ಕಾ ಡಾಬಾ ಖ್ಯಾತಿಯ ಕಾಂತಾ ಪ್ರಸಾದ್ ದಿಢೀರ್ ಆಗಿ ಜೂನ್ 18ರಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಹೀಗಾಗಿ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅವರು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಈ ವೇಳೆ ಪೊಲೀಸರ ಮುಂದೆ ತಮ್ಮ ಹೇಳಿಕೆ ನೀಡಿರುವ ಕಾಂತಾ ಪ್ರಸಾದ್, YouTubers ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ಒತ್ತಡದಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಿಕೊಂಡಿದ್ದಾರೆ.
ಯಾವ ಕಾರಣಕ್ಕಾಗಿ ಆತ್ಮಹತ್ಯೆ ಯತ್ನ?