ನವದೆಹಲಿ:ಬಿಜೆಪಿ ಮಾಜಿ ನಾಯಕ ಬಾಬುಲ್ ಸುಪ್ರಿಯೋ ಇಂದು ಅಧಿಕೃತವಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಒಂದು ತಿಂಗಳ ಹಿಂದಷ್ಟೇ ಬಾಬುಲ್ ಬಿಜೆಪಿ ತೊರೆದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಸೇರಿದ್ದರು.
ಸಂಸತ್‌ನಲ್ಲಿಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವ ಸುಪ್ರಿಯೋ, ತಮ್ಮ ಮೇಲೆ ತೋರಿಸಿದ ವಿಶ್ವಾಸಕ್ಕೆ ಬಿಜೆಪಿ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ನಾನು ನನ್ನ ರಾಜಕೀಯ ಜೀವನವನ್ನು ಬಿಜೆಪಿಯಿಂದ ಆರಂಭಿಸಿದ್ದರಿಂದ ನನ್ನ ಹೃದಯ ಭಾರವಾಗಿದೆ. ಪ್ರಧಾನಮಂತ್ರಿ, ಪಕ್ಷದ ಮುಖ್ಯಸ್ಥರು ಮತ್ತು ಅಮಿತ್ ಶಾ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ನನ್ನ ಮೇಲೆ ವಿಶ್ವಾಸವನ್ನು ತೋರಿಸಿದ್ದರು. ಪಕ್ಷದ ಸದಸ್ಯನಲ್ಲದಿದ್ದರೆ, ನನಗಾಗಿ ಯಾವುದೇ ಸ್ಥಾನವನ್ನು ಉಳಿಸಿಕೊಳ್ಳಬಾರದು ಎಂದು ನಾನು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.