ತಿರುವನಂತಪುರಂ(ಕೇರಳ):ಮನೆಯೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ, ಮಗು ಸೇರಿ ಐವರು ಸಜೀವವಾಗಿ ದಹನಗೊಂಡಿರುವ ಘಟನೆ ಕೇರಳದ ದವಳಪುರಂನಲ್ಲಿ ಮುಂಜಾನೆ ನಡೆದಿದೆ ನಡೆದಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳವಾರ ನಸುಕಿನ 1.45ರ ವೇಳೆಗೆ ವರ್ಕಳ ಸಮೀಪದ ಚೆರುನ್ನಿಯೂರಿನ ದವಳಪುರಂನಲ್ಲಿ ಪ್ರತಾಪನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸೃಷ್ಟಿಸಿದೆ. ಈ ವೇಳೆ, ಐವರು ಮೃತಪಟ್ಟಿದ್ದಾರೆ. ಮೃತರನ್ನು ಪ್ರತಾಪನ್ (64), ಅವರ ಪತ್ನಿ ಶೇರ್ಲಿ (53), ಕಿರಿಯ ಮಗ ಅಖಿಲ್ (25), ಹಿರಿಯ ಮಗನ ಪತ್ನಿ ಅಭಿರಾಮಿ (24) ಮತ್ತು ಎಂಟು ತಿಂಗಳ ಮೊಮ್ಮಗ ರಾಯನ್ ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿ ನಿಖಿಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.