ರುದ್ರಪ್ರಯಾಗ್ (ಉತ್ತರಾಖಂಡ್):ಧಾರಾಕಾರ ಮಳೆ ಸುರಿದ ಪರಿಣಾಮ ಕೇದಾರನಾಥ-ಬದ್ರಿನಾಥ ದೇವಾಲಯ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬರೋಬ್ಬರಿ 10 ಕಿ.ಮೀ ದೂರದವರೆಗೂ ಟ್ರಾಫಿಕ್ ಜಾಮ್ನಿಂದಾಗಿ ಸವಾರರು ಪರದಾಡಬೇಕಾದ ಪರಿಸ್ಥಿತಿ ಉಂಟಾಗಿತ್ತು.
ಈ ಮಾರ್ಗದಲ್ಲಿ ಧಾರಾಕಾರ ಮಳೆ ಸುರಿದಿದ್ದರಿಂದ ರಸ್ತೆ ಮೇಲೆ ನೀರು ನಿಂತಿತ್ತು. ಜೊತೆಗೆ ಮಳೆ ನೀರಿನಲ್ಲಿ ಮಣ್ಣು, ಕಲ್ಲುಗಳು ರಸ್ತೆಗೆ ಬಿದ್ದಿದ್ದರಿಂದಾಗಿ ಸಂಚಾರಕ್ಕೆ ಅಡೆತಡೆಯಾಗಿತ್ತು. ಹೀಗಾಗಿ ವಾಹನ ಸವಾರರು 4 ಗಂಟೆಗಳ ಕಾಲ ಟ್ರಾಫಿಕ್ ಜಾಮ್ನಲ್ಲಿಯೇ ಸಿಲುಕಿ ಪರದಾಡಿದರು.