ಮುಂಬೈ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಪ್ರಸಾದ್ ಲಾಡ್ ಅವರ ಮನೆಯ ಹೊರಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ಈ ಬ್ಯಾಗ್ನಲ್ಲಿ ನಗದು, ನಾಣ್ಯಗಳು, ಗಣಪತಿ ವಿಗ್ರಹ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿವೆ.
ಇಂದು ಮುಂಜಾನೆ 5.30 ರಿಂದ 6 ಗಂಟೆಯ ನಡುವೆ ಅನುಮಾನಾಸ್ಪದ ವ್ಯಕ್ತಿಯೊಬ್ಬರು ಮನೆ ಸಮೀಪ ಹೋಗುತ್ತಿರುವುದನ್ನು ನೋಡಿರುವುದಾಗಿ ಪ್ರಸಾದ್ ಲಾಡ್ ತಿಳಿಸಿದ್ದಾರೆ. ಆ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲು ಯತ್ನಿಸಿದಾಗ ಆತ ಬ್ಯಾಗ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗ್ತಿದೆ. ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.