ನವದೆಹಲಿ:ದೆಹಲಿಯಲ್ಲಿ ಉಂಟಾಗಿರುವ ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಡಿಸೆಂಬರ್ 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಹಾಗೂ ಟ್ರಕ್ಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದೆ.
ದೆಹಲಿ ಪರಿಸರ ಸಂರಕ್ಷಣೆ ಖಾತೆ ಮಂತ್ರಿ ಗೋಪಾಲ್ ರಾಯ್ ಈ ನಿರ್ಧಾರ ಕೈಗೊಂಡಿದ್ದು, ಬರುವ ಡಿಸೆಂಬರ್ 7ರವರೆಗ ಟ್ರಕ್ಗಳ ಓಡಾಟದ ಮೇಲೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದ್ದು, ಅಗತ್ಯ ವಸ್ತುಗಳ ಟ್ರಕ್ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಸಿಬ್ಬಂದಿಗಳಿಗೋಸ್ಕರ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಇದರ ಜೊತೆಗೆ, ಕಟ್ಟಡ ನಿರ್ಮಾಣ ಕಾರ್ಯ ಸಹ ಸ್ಥಗಿತಗೊಳ್ಳಲಿದೆ ಎಂದರು.