ಹೈದರಾಬಾದ್: ಜುಲೈ ತಿಂಗಳಲ್ಲಿ ಭಾರತದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್ಲಾ ಬ್ಯಾಂಕ್‌ಗಳು 15 ದಿನಗಳ ಕಾಲ ಮುಚ್ಚಲಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಹಬ್ಬ ಹರಿದಿನಗಳು ಮತ್ತು ಎರಡನೇ ಶನಿವಾರ, ಭಾನುವಾರ ಹಾಗೂ ನಾಲ್ಕನೇ ಶನಿವಾರ ಭಾನುವಾರ ಸೇರಿ ಒಟ್ಟು 15 ದಿನ ಬ್ಯಾಂಕ್‌ಗಳು ಬಂದ್ ಇರಲಿವೆ ಎಂದು ತಿಳಿಸಿದೆ.
ಜುಲೈ ತಿಂಗಳಲ್ಲಿ 9 ದಿನ ಹಬ್ಬಗಳಿದ್ದು ಆಗ ಬ್ಯಾಂಕ್ಗಳಿಗೆ ರಜೆ ಇರಲಿದೆ. ಹಾಗೆಯೇ ಉಳಿದ ರಜೆಗಳು ಎರಡನೇ ಶನಿವಾರ, ಭಾನುವಾರ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಸೇರಿವೆ. ಈ ದಿನಗಳಲ್ಲಿ ಆನ್‌ಲೈನ್ ಬ್ಯಾಂಕಿಂಗ್ ಸೇವೆಗಳು ಕಾರ್ಯನಿರ್ವಹಿಸುತ್ತವೆ. ವಿವಿಧ ರಾಜ್ಯಗಳಲ್ಲಿ ಹಬ್ಬದ ರಜಾದಿನಗಳು ಬೇರೆ ಬೇರೆಯಾಗಿ ಇರಲಿವೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ.