ಕರ್ನಾಟಕ

karnataka

ETV Bharat / bharat

ಶಿಕ್ಷಕಿ ಕೊಲೆ ಬೆನ್ನಲ್ಲೇ ಬ್ಯಾಂಕ್ ಮ್ಯಾನೇಜರ್​ಗೆ​ ಗುಂಡಿಕ್ಕಿ ಹತ್ಯೆಗೈದ ಉಗ್ರ... ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಕೊಂದ ಉಗ್ರರು

ಜಮ್ಮು-ಕಾಶ್ಮೀರದಲ್ಲಿ ಮುಸ್ಲಿಮೇತರರ ಮೇಲಿನ ಗುಂಡಿನ ದಾಳಿ ಮುಂದುವರೆದಿದ್ದು, ಇಂದು ಸಹ ಬ್ಯಾಂಕ್​ ಮ್ಯಾನೇಜರ್​ವೋರ್ವರನ್ನ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Bank Manager From Rajasthan Shot Dead In Kulgam
Bank Manager From Rajasthan Shot Dead In Kulgam

By

Published : Jun 2, 2022, 12:12 PM IST

Updated : Jun 2, 2022, 1:35 PM IST

ಶ್ರೀನಗರ(ಜಮ್ಮು-ಕಾಶ್ಮೀರ): ಕಳೆದ ಕೆಲ ದಿನಗಳಿಂದ ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮತ್ತಷ್ಟು ಹೆಚ್ಚಾಗಿದ್ದು, ಸರ್ಕಾರಿ ಅಧಿಕಾರಿಗಳನ್ನೇ ಗುಂಡಿಕ್ಕಿ ಹತ್ಯೆಗೈಯುತ್ತಿದ್ದಾರೆ. ಕಳೆದ ಕೆಲ ವಾರಗಳ ಹಿಂದೆ ತಹಶೀಲ್ದಾರ್ ಕಚೇರಿಗೆ ನುಗ್ಗಿ ಅಧಿಕಾರಿಯ ಹತ್ಯೆಗೈದಿದ್ದ ಉಗ್ರರು, ಮೂರು ದಿನಗಳ ಹಿಂದೆ ಶಾಲಾ ಶಿಕ್ಷಕಿಯೋರ್ವರಿಗೆ ಗುಂಡಿಕ್ಕಿದ್ದರು. ಇದರ ಬೆನ್ನಲ್ಲೇ ಇದೀಗ ಕುಲ್ಗಾಮ್​​ನಲ್ಲಿ ಬ್ಯಾಂಕ್​ ಮ್ಯಾನೇಜರ್​​ವೋರ್ವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಲಾಗಿದೆ.

ಬ್ಯಾಂಕ್ ಮ್ಯಾನೇಜರ್​ಗೆ​ ಗುಂಡಿಕ್ಕಿ ಹತ್ಯೆಗೈದ ಉಗ್ರ ಪರಾರಿ

ಜಮ್ಮು-ಕಾಶ್ಮೀರದ ಕುಲ್ಗಾಮ್​ನಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಬ್ಯಾಂಕ್​ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆ ಮಾಡಿದ್ದಾರೆ. ಬ್ಯಾಂಕ್​​ನಲ್ಲಿ ಕೆಲಸ ಮಾಡ್ತಿದ್ದ ವೇಳೆ ಅಲ್ಲಿಗೆ ತೆರಳಿರುವ ಉಗ್ರ, ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಬ್ಯಾಂಕ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಕೇವಲ ಮೂರು ದಿನಗಳ ಅಂತರದಲ್ಲಿ ನಡೆದಿರುವ ಎರಡನೇ ಪ್ರಕರಣ ಇದಾಗಿದೆ. ಇಲಾಖಾಹಿ ದೇಹತಿ ಬ್ಯಾಂಕ್ ಮ್ಯಾನೇಜರ್​ ವಿಜಯ್ ಕುಮಾರ್​ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರನ್ನ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಶಿಕ್ಷಕಿ ಗುಂಡಿಕ್ಕಿ ಕೊಂದ ಉಗ್ರರು... ಶ್ರೀನಗರ-ಜಮ್ಮು ಹೈವೇ ಬಂದ್ ಮಾಡಿ ಪ್ರತಿಭಟನೆ ನಡೆಸಿರುವ ಕಾಶ್ಮೀರಿ ಪಂಡಿತರು

ಘಟನೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದು, ಕುಲ್ಗಾಮ್​ನಲ್ಲಿ ಈ ದಾಳಿ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಭದ್ರತಾ ಪಡೆ ಬೀಡು ಬಿಟ್ಟಿದೆ.

ಬ್ಯಾಂಕ್ ಮ್ಯಾನೇಜರ್​ ವಿಜಯ್ ಕುಮಾರ್ ಸಾವು

ಕಳೆದ ಮೂರು ದಿನಗಳ ಹಿಂದೆ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಾಶ್ಮೀರಿ ಪಂಡಿತ ಶಿಕ್ಷಕಿಯೋರ್ವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕುಲ್ಗಾಮ್​ ಪ್ರದೇಶದಲ್ಲಿ ನಡೆದಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ಸಹ ವ್ಯಕ್ತವಾಗಿದೆ. ಕಣಿವೆ ಪ್ರದೇಶದಲ್ಲಿ ಮುಸ್ಲಿಮೇತರ ನೌಕರರ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ ಕೇಳಿಬಂದಿದೆ.

ಅಶೋಕ್ ಗೆಹ್ಲೋಟ್ ಟ್ವೀಟ್​:ಘಟನೆಗೆ ಸಂಬಂಧಿಸಿದಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮ್ಮು-ಕಾಶ್ಮೀರದ ಕುಲ್ಗಾಮ್​​ನಲ್ಲಿ ಕೆಲಸ ಮಾಡ್ತಿದ್ದ ರಾಜಸ್ಥಾನದ ಹನುಮಾನ್​ಗಢನ ನಿವಾಸಿ ವಿಜಯ್ ಕುಮಾರ್ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ ಖಂಡನೀಯ. ಕಾಶ್ಮೀರದಲ್ಲಿ ಶಾಂತಿ ಕಾಪಾಡುವಲ್ಲಿ ಎನ್​​ಡಿಎ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅಲ್ಲಿ ವಾಸಿಸುತ್ತಿರುವ ನಾಗರಿಕರ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರ ಖಚಿತತೆ ನೀಡಬೇಕು ಎಂದಿದ್ದಾರೆ.

Last Updated : Jun 2, 2022, 1:35 PM IST

For All Latest Updates

ABOUT THE AUTHOR

...view details