ಕರ್ನಾಟಕ

karnataka

ETV Bharat / bharat

ಬಿಲ್ಕಿಸ್​ ಬಾನೊ ಅವಿರತ ಹೋರಾಟ ಸೊಕ್ಕಿನ ಬಿಜೆಪಿ ಸರ್ಕಾರದ ವಿರುದ್ಧ ನ್ಯಾಯಕ್ಕೆ ಸಂದಿರುವ ಜಯ : ರಾಹುಲ್​ ಗಾಂಧಿ - ನ್ಯಾಯಕ್ಕೆ ಸಂದಿರುವ ಜಯ

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್​ ತೀರ್ಪನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸ್ವಾಗತಿಸಿದ್ದಾರೆ. ಇದೇ ಗುಜರಾತ್​ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Etv Bharat
Etv Bharat

By ETV Bharat Karnataka Team

Published : Jan 8, 2024, 4:26 PM IST

Updated : Jan 8, 2024, 5:52 PM IST

ಹೈದರಾಬಾದ್​/ ನವದೆಹಲಿ: ಬಿಲ್ಕಿಸ್​ ಬಾನೊ ಪ್ರಕರಣದಲ್ಲಿ 11 ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪನ್ನು ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿ ಸ್ವಾಗತಿಸಿದ್ದಾರೆ. ಬಿಲ್ಕಿಸ್​ ಬಾನೊ ಅವರ ಅವಿರತ ಹೋರಾಟವು ಸೊಕ್ಕಿನ ಬಿಜೆಪಿ ಸರ್ಕಾರದ ವಿರುದ್ಧ ನ್ಯಾಯಕ್ಕೆ ಸಂದಿರುವ ಜಯ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ರಾಹುಲ್​, 'ಚುನಾವಣಾ ಲಾಭಕ್ಕಾಗಿ ನ್ಯಾಯವನ್ನು ಕೊಲ್ಲುವ ಪ್ರವೃತ್ತಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಸುಪ್ರೀಂ ಕೋರ್ಟ್​ನ ತೀರ್ಪು ಇಂದು ಅಪರಾಧಿಗಳನ್ನು ಪೋಷಿಸುತ್ತಿರುವವರು ಯಾರು ಎಂಬುದನ್ನು ದೃಢಪಡಿಸಿದೆ. ಬಿಲ್ಕಿಸ್​ ಬಾನೋ ಅವರ ಅವಿರತ ಹೋರಾಟವು ಬಿಜೆಪಿ ಸರ್ಕಾರದ ವಿರುದ್ಧ ನ್ಯಾಯಕ್ಕೆ ಸಂದಿರುವ ಜಯ' ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, 'ಅಂತಿಮವಾಗಿ ನ್ಯಾಯ ಗೆದ್ದಿದೆ. ಗುಜರಾತ್​ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದ ಬಿಜೆಪಿಯ ಮಹಿಳಾ ವಿರೋಧಿ ನೀತಿಯ ಮುಸುಕು ಸರಿದಿದೆ. ಈ ಆದೇಶದ ಬಳಿಕ ನ್ಯಾಯ ವ್ಯವಸ್ಥೆಯಲ್ಲಿನ ಸಾರ್ವಜನಿಕರ ವಿಶ್ವಾಸ ಮತ್ತಷ್ಟು ಬಲಗೊಂಡಿದೆ. ತನ್ನ ಹೋರಾಟವನ್ನು ಧೈರ್ಯದಿಂದ ನಡೆಸಿದ ಬಿಲ್ಕಿಸ್​ ಬಾನೋ ಅವರಿಗೆ ಅಭಿನಂದನೆ' ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ ನಾಯಕ ಪವನ್​ ಖೇರಾ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿ, 'ಸುಪ್ರೀಂ ಕೋರ್ಟ್​ ಬಿಲ್ಕಿಸ್​ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ. ಇದು ಗುಜರಾತ್​ ಬಿಜೆಪಿ ಸರ್ಕಾರದ ಮಹಿಳೆಯರ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದೆ. ಈ ತೀರ್ಪಿನಿಂದ ಅಪರಾಧಿಗಳ ಬಿಡುಗಡೆಗೆ ಸಹಕರಿಸಿದವರಿಗೆ ಮತ್ತು ಅಪರಾಧಿಗಳಿಗೆ ಹಾರ ಹಾಕಿ ಸ್ವಾಗತ ಕೋರಿದವರಿಗೆ ಕಪಾಳ ಮೋಕ್ಷ ಮಾಡಿದಂತಾಗಿದೆ' ಎಂದು ಬರೆದುಕೊಂಡಿದ್ದಾರೆ.

ಬಿಲ್ಕಿಸ್​ ಬಾನೊ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ​ ತೀರ್ಪು ನೀಡಿದೆ. ಗುಜರಾತ್ ಸರ್ಕಾರ ಬಿಡುಗಡೆಗೊಳಿಸಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಲಾಗಿದೆ. ಮುಂದಿನ ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ.

ಬಿಲ್ಕಿಸ್​ ಬಾನೊ ಪ್ರಕರಣದಲ್ಲಿ, ಕಾನೂನಿನ ನಿಯಮಗಳನ್ನು ಜಾರಿಗೊಳಿಸುವಾಗ ಸಹಾನುಭೂತಿ ಯಾವುದೇ ಪಾತ್ರವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯಪಟ್ಟಿದೆ. ಜೊತೆಗೆ ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ರದ್ದುಗೊಳಿಸಿದ ನಂತರ, 11 ಜನ ಅಪರಾಧಿಗಳು ಎರಡು ವಾರದೊಳಗಾಗಿ ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ಇದನ್ನೂ ಓದಿ :ಬಿಲ್ಕಿಸ್ ಬಾನೊ ಪ್ರಕರಣ: 11 ಅಪರಾಧಿಗಳ ಬಿಡುಗಡೆ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Last Updated : Jan 8, 2024, 5:52 PM IST

ABOUT THE AUTHOR

...view details