ಬರೇಲಿ (ಉತ್ತರ ಪ್ರದೇಶ):5 ಯುವಕರು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ತನಿಖೆ ನಡೆಯುತ್ತಿದೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ 5 ಯುವಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಅಪ್ರಾಪ್ತೆ ಈ ಕುರಿತು ದೂರು ಸಲ್ಲಿಸಿದ್ದು, ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ನನ್ನೊಂದಿಗೆ ಸಂಪರ್ಕದಲ್ಲಿದ್ದ. ಕೆಲ ಖಾಸಗಿ ಕ್ಷಣದ ವಿಡಿಯೋ ಕೂಡ ಮಾಡಿಕೊಂಡಿದ್ದ. ಅದನ್ನು ಇಟ್ಟುಕೊಂಡು ನನಗೆ ಬೆದರಿಕೆ ಹಾಕಿ ಬಳಿಕ ಆತನ ಸ್ನೇಹಿತರೊಂದಿಗೆ ಜೊತೆಗೂಡಿ ತನ್ನನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆಂದು ತಿಳಿಸಿದ್ದಾಳೆ.