ಬರಿಪದ (ಒಡಿಶಾ):ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಬಿಸಿಲಿನ ಬೇಗೆ ಆರಂಭವಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲದೇ ಕೆಲ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆಯಾಗುತ್ತಿದ್ದು ಜನರಿಗೆ ಎಚ್ಚರಿಕೆ ವಹಿಸುವಂತೆ ಹವಮಾನ ಇಲಾಖೆ ತಿಳಿಸಿದೆ. ಇತ್ತೀಚೆಗೆ ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದಾಗ ಆಗುವಷ್ಟು ಅನುಭವದ ತಾಪಮಾನ ದಾಖಲಾಗಿತ್ತು ಎಂದು ವರಿದಯಾಗಿತ್ತು. ಇದು ಅಲ್ಲಿಯ ಈ ವರೆಗಿನ ಅತ್ಯಂತ ಹೆಚ್ಚಿನ ತಾಪಮಾನವಾಗಿ ದಾಖಲಾಗಿತ್ತು. ಇದೀಗಾ ಒಡಿಶಾದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿರುವ ವರದಿಯಾಗಿದೆ.
ಬರಿಪದ ಜಿಲ್ಲೆಯಲ್ಲಿ 43.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಾನ ದಾಖಲಾಗಿದ್ದು, ಮುಂದಿನ ಮೂರು ದಿನಗಳ ವರೆಗೆ ಇದು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ಜನರು ಜಾಗೃತೆ ವಹಿಸಯವಂತೆ ಇಲಾಖೆ ತಿಳಿಸಿದೆ. ಇದಕ್ಕೂ ಮೊದಲು ಅತಿ ಹೆಚ್ಚು ತಾಪಮಾನ 43.5 ಡಿಗ್ರಿ ಸೆಲ್ಸಿಯಸ್ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯಲ್ಲಿ ವರದಿಯಾಗಿತ್ತು.
ಮುಂದಿನ 2 ದಿನಗಳ ಕಾಲ ದೇಶದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಯಾವುದೇ ಬದಲಾವಣೆಗಳಿರದೇ ಇದೇ ತಾಪಮಾನ ಮುಂದುವರೆಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ. ಸಧ್ಯ ಪಶ್ಚಿಮ ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಜಮ್ಮುವಿನ ಕೆಲ ಭಾಗಗಳಲ್ಲಿ ಶಾಖದ ಅಲೆ ಕಂಡುಬಂದರೆ, ಸೌರಾಷ್ಟ್ರ-ಕಚ್, ವಿದರ್ಭ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಉಷ್ಣ ತಾಪಮಾನ ಮುಂದುವರೆದಿದೆ.
ಜಮ್ಮು ಮತ್ತು ಕಾಶ್ಮೀರದ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದ ಹೆಚ್ಚಿನ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯ ತಾಪಮಾನಗಿಂತ 5.1 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಹರಿಯಾಣ, ಚಂಡೀಗಢ, ದೆಹಲಿ, ಅರುಣಾಚಲ ಪ್ರದೇಶ, ಅಸ್ಸೋಂ ಮತ್ತು ಮೇಘಾಲಯದ ಅನೇಕ ಸ್ಥಳಗಳಲ್ಲೂ ತಾಪಮಾನದಲ್ಲಿ ಏರಿಕೆ ಕಂಡು ಬಂದಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.