ನವದೆಹಲಿ :ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಮತ್ತು ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಲು ಕೇಂದ್ರ ಸರ್ಕಾರ ಹೊಸ ನೀತಿಯನ್ನು ಪರಿಚಯ ಮಾಡಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಬ್ಯಾಟರಿ-ಸ್ವಾಪಿಂಗ್ ನೀತಿಯನ್ನು ಹೊರತರಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆ ಉತ್ತೇಜಿಸಲು, ಪರಿಸರ ಸ್ನೇಹಿ ಇಂಧನ ನೀತಿಯನ್ನು ಪರಿಚಯಿಸಲಾಗುವುದು. ಹೊಸ ಬ್ಯಾಟರಿ ವಿನಿಮಯ ನೀತಿಯನ್ನು ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.