ಎದೆ ನೋವು: ಮತ್ತೆ ಆಸ್ಪತ್ರೆಗೆ ದಾಖಲಾದ ಬಿಸಿಸಿಐ ಅಧ್ಯಕ್ಷ ಗಂಗೂಲಿ - ಆಸ್ಪತ್ರೆಗೆ ದಾಖಲಾದ ಗಂಗೂಲಿ
14:44 January 27
ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಾದ ಗಂಗೂಲಿ
ಕೋಲ್ಕತ್ತಾ:ಕಳೆದ ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಘು ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಕೋಲ್ಕತ್ತಾ ವುಡ್ಲ್ಯಾಂಡ್ ಆಸ್ಪತ್ರೆಗೆ ಈ ಹಿಂದೆ ದಾಖಲಿಸಲಾಗಿತ್ತು. ಇದಾದ ಬಳಿಕ ಆ್ಯಂಜಿಯೊಪ್ಲಾಸ್ಟಿ ಮಾಡಲಾಗಿತ್ತು. ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ದಾದಾ ಜನವರಿ 6ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.