ನವದೆಹಲಿ:ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ 26 ವರ್ಷಗಳ ಸುದೀರ್ಘ ಸೆರೆವಾಸ ಅನುಭವಿಸಿದ ಹಿನ್ನೆಲೆಯಲ್ಲಿ ತನಗೆ ವಿಧಿಸಲಾಗಿರುವ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕು ಎಂಬ ಬಲ್ವಂತ್ ಸಿಂಗ್ ರಾಜೋನಾ ಮನವಿಯನ್ನು 2 ತಿಂಗಳೊಳಗೆ ತೀರ್ಮಾನಿಸುವಂತೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಪೀಠವು ಈ ಪ್ರಕರಣವನ್ನು ಕೇಂದ್ರ ಸರ್ಕಾರವೇ ನಿರ್ಧರಿಸಬೇಕಾಗಿದೆ. ಸುಪ್ರೀಂಕೋರ್ಟ್ನಲ್ಲಿ ಬಾಕಿ ಉಳಿದ ಮೇಲ್ಮನವಿ ಅರ್ಜಿಗಳಂತೆ ಇದೂ ಕೂಡ ಒಂದಾಗಿದೆ. ಹೀಗಾಗಿ ಈ ಪ್ರಕರಣದ ಅರ್ಜಿಯನ್ನು ಶೀಘ್ರವೇ ಇತ್ಯರ್ಥಪಡಿಸುವ ಸಲುವಾಗಿ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯ ಕೋರಿದೆ.