ಕೋಲ್ಕತ್ತಾ:ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ನೊಂದಿಗೆ ಕಾಂಗ್ರೆಸ್ ಕೈಜೋಡಿಸಿತ್ತು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮಾತನಾಡಿದ್ದಾರೆ.
ಭವಿಷ್ಯದಲ್ಲಿ ಯಾವುದೇ ಕಾರಣಕ್ಕೂ ಐಎಸ್ಎಫ್ ನಮ್ಮ ಜೊತೆ ಮೈತ್ರಿಕೂಟದಲ್ಲಿ ಇರುವುದಿಲ್ಲ. ಯಾವುದೇ ಚುನಾವಣೆಗೂ ಅದರೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.
ಐಎಸ್ಎಫ್ ಜತೆ ಮೈತ್ರಿ ಮಾಡಿಕೊಳ್ಳದಂತೆ ಎಡಪಂಥೀಯರನ್ನು ಕೇಳಿಕೊಂಡಿದ್ದೇನೆ ಎಂದಿರುವ ಕಾಂಗ್ರೆಸ್ ಮುಖಂಡ, ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷ ಐಎಸ್ಎಫ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರಲಿಲ್ಲ. ಅದು ಎಡಪಂಥೀಯ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿತ್ತು ಎಂದು ಅವರು ತಿಳಿಸಿದ್ದಾರೆ.