ಕೋಲ್ಕತ್ತಾ: 2016ರ ನಾರದ ಸ್ಟಿಂಗ್ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಮುಖಂಡರ ಮೇಲೆ ಕಾನೂನು ಕ್ರಮ ಜರುಗಿಸಲು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮತಿ ನೀಡಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ ಸಂಪುಟದಲ್ಲಿ ಸಚಿವರಾಗಿದ್ದ ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಮತ್ತು ಸೋವನ್ ಚಟರ್ಜಿ, ಫಿರ್ಹಾದ್ ಹಕೀಮ್ ವಿರುದ್ಧ ಸಿಬಿಐ ಕ್ರಮ ಕೈಗೊಳ್ಳಲಿದೆ.
ಇದನ್ನೂ ಓದಿ: ಬಂಗಾಳ ಸರ್ಕಾರವೇ ಗೂಂಡಾಗಳಿಗೆ ಬೆಂಬಲವಾಗಿ ನಿಂತಿದೆ: ದೀದಿ ವಿರುದ್ಧ ಸಿ.ಟಿ.ರವಿ ಕಿಡಿ
ಏನಿದು ನಾರದ ಸ್ಟಿಂಗ್ ಟೇಪ್ ಪ್ರಕರಣ?
2016ರ ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ನಾರದ ಎಂಬ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ಟಿಎಂಸಿ ನಾಯಕರು ಲಂಚ ತೆಗೆದುಕೊಳ್ಳುತ್ತಿರುವುದು ಬಯಲಾಗಿತ್ತು. ಈ ದೃಶ್ಯದ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. 2017ರ ಮಾರ್ಚ್ನಲ್ಲಿ ಕೋಲ್ಕತ್ತಾ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.