ಕೋಲ್ಕತ್ತಾ:ಮಹಾಮಾರಿ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಕೆಲವೊಂದು ರಾಜ್ಯಗಳು ಬೇರೆ ರಾಜ್ಯಗಳಿಂದ ಬರುವ ಜನರ ಮೇಲೆ ನಿರ್ಬಂಧ ವಿಧಿಸುತ್ತಿದ್ದು, ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ಅಂತಹದ್ದೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ವಿಮಾನಯಾನದ ಮೂಲಕ ಪಶ್ಚಿಮ ಬಂಗಾಳಕ್ಕೆ ತೆರಳುವ ನಾಲ್ಕು ರಾಜ್ಯದ ಜನರಿಗೆ ಇದೀಗ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಹಾಗೂ ಛತ್ತೀಸಗಢ ರಾಜ್ಯದ ಜನರಿಗೆ ಆರ್ಟಿ-ಪಿಸಿಆರ್ ವರದಿ ಕಡ್ಡಾಯ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾಯಾನ ಇಲಾಖೆಗೆ ಈಗಾಗಲೇ ಮಾಹಿತಿ ಸಹ ನೀಡಿದೆ.