ಕರ್ನಾಟಕ

karnataka

ETV Bharat / bharat

ಅನಾರೋಗ್ಯದಿಂದ ಬಳಲುತ್ತಿದ್ದ ತೃಣಮೂಲ ಕಾಂಗ್ರೆಸ್ ಸಚಿವ ಸುಬ್ರತಾ ಮುಖರ್ಜಿ ನಿಧನ - ಕೋಲ್ಕತ್ತಾ

ತೃಣಮೂಲ ಕಾಂಗ್ರೆಸ್​ನ ಹಿರಿಯ ಸಚಿವ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.

bengal-minister-subrata-mukherjee-passes-away
ಅನಾರೋಗ್ಯದಿಂದ ಬಳಲುತ್ತಿದ್ದ ತೃಣಮೂಲ ಕಾಂಗ್ರೆಸ್ ಸಚಿವ ಸುಬ್ರತಾ ಮುಖರ್ಜಿ ನಿಧನ

By

Published : Nov 5, 2021, 7:29 AM IST

ಕೋಲ್ಕತ್ತಾ (ಪ.ಬಂ): ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಸುಬ್ರತಾ ಮುಖರ್ಜಿ ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಪಂಚಾಯತ್ ರಾಜ್ ಸಚಿವರಾಗಿದ್ದ ಮುಖರ್ಜಿ ಅವರಿಗೆ 75 ವರ್ಷವಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕಳೆದ ವಾರ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಹಿನ್ನೆಲೆ ನಿನ್ನೆ ಸಂಜೆ ಎಸ್​​ಎಸ್​​ಕೆಎಂ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಮಮತಾ ಬ್ಯಾನರ್ಜಿ, ಅವರು ಇನ್ನು ಮುಂದೆ ನಮ್ಮೊಂದಿಗಿಲ್ಲ ಎನ್ನುವುದನ್ನು ನನಗೆ ನಂಬಲಾಗುತ್ತಿಲ್ಲ. ಅವರು ಅಂತಹ ಸಮರ್ಪಿತ ಪಕ್ಷದ ನಾಯಕರಾಗಿದ್ದರು. ಇದು ನನಗೆ ವೈಯಕ್ತಿಕ ನಷ್ಟ. ಅವರ ಕುಟುಂಬಸ್ಥರ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ಇಂದು ಕೇದಾರನಾಥ್​ಗೆ ಮೋದಿ ಭೇಟಿ... ಶಂಕರಾಚಾರ್ಯರ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ

ABOUT THE AUTHOR

...view details