ಕರ್ನಾಟಕ

karnataka

ETV Bharat / bharat

ಮತದಾರರು ತಪ್ಪು ಮಾಡಿದ್ರೆ ಯುಪಿ ಕಾಶ್ಮೀರ, ಬಂಗಾಳ ಆಗಬಹುದು: ಯೋಗಿ ಆದಿತ್ಯನಾಥ್

ಕಳೆದ ಐದು ವರ್ಷಗಳಿಂದ ನಾನು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ನನ್ನ ಶ್ರಮಕ್ಕೆ ನಿಮ್ಮ ಮತವೇ ವರದಾನ. ನಿಮ್ಮ ಮತ ನಿಮ್ಮ ಭಯ ಮುಕ್ತ ಬದುಕಿಗೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಮತದಾರರು ತಪ್ಪು ಮಾಡಿದ್ರೆ ಉತ್ತರ ಪ್ರದೇಶ ಸಹ ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳ ಆಗಬಹುದು ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

By

Published : Feb 10, 2022, 2:22 PM IST

ನವದೆಹಲಿ: ಮತದಾರರು ತಪ್ಪು ಮಾಡಿದ್ರೆ ಉತ್ತರ ಪ್ರದೇಶ ಸಹ ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳ ಆಗಬಹುದು. ಮತದಾರ ಬಂಧುಗಳು ಯೋಚಿಸಿ ನಿಮ್ಮ ಹಕ್ಕು ಚಲಾಯಿಸಿ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನವಿ ಮಾಡಿದರು.

ಟ್ವಿಟರ್‌ನಲ್ಲಿ ಯೋಗಿ ಆದಿತ್ಯನಾಥ್ ಮಾತನಾಡಿರುವ ವಿಡಿಯೋವೊಂದನ್ನು ಬಿಜೆಪಿ ಉತ್ತರ ಪ್ರದೇಶ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಮಾತನಾಡಿರುವ ಸಿಎಂ, ಬಿಜೆಪಿಗೆ ಮತ ಹಾಕಿ ನೀವು ಗೆಲ್ಲಿಸಿದರೆ ಮುಂದಿನ ದಿನಗಳಲ್ಲಿ ಭಯ ಮುಕ್ತ ಜೀವನ ನಡೆಸಲು ಸಾಧ್ಯವಾಗುತ್ತದೆ. ಕಳೆದ ಐದು ವರ್ಷಗಳಿಂದ ನಾನು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ನನ್ನ ಶ್ರಮಕ್ಕೆ ನಿಮ್ಮ ಮತವೇ ವರದಾನ. ನಿಮ್ಮ ಮತ ನಿಮ್ಮ ಭಯ ಮುಕ್ತ ಬದುಕಿಗೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ ಎಂದಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವು ಬಹಳಷ್ಟು ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿದೆ. ಮತದಾರರು ಸ್ವಲ್ಪ ಎಚ್ಚರ ತಪ್ಪಿದರೂ ಈ ಐದು ವರ್ಷಗಳ ದುಡಿಮೆ ಹಾಳಾಗುತ್ತದೆ. ಯೋಚಿಸಿ ಮತದಾನ ಮಾಡಿ ಎಂದು ಯೋಗಿ ಆದಿತ್ಯನಾಥ್ ವಿಡಿಯೋದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಅಡ್ಡಿಪಡಿಸಲು ಜನರು ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ: ಮೋದಿ

ಮತದಾರರು ಎಚ್ಚರ ತಪ್ಪಿದರೆ ಈ ಐದು ವರ್ಷಗಳ ದುಡಿಮೆ ಹಾಳಾಗುತ್ತದೆ. ಇದಕ್ಕೆ ಹೆಚ್ಚು ಸಮಯದ ಅಗತ್ಯವಿಲ್ಲ, ಕ್ಷಣಮಾತ್ರದಲ್ಲಿ ಉತ್ತರಪ್ರದೇಶವು ಕಾಶ್ಮೀರ, ಕೇರಳ ಮತ್ತು ಬಂಗಾಳವಾಗಲಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

11 ತಿಂಗಳ ಕಾಲ ರೈತರ ಪ್ರತಿಭಟನೆಯ ಕೇಂದ್ರವಾಗಿದ್ದ ಉತ್ತರ ಪ್ರದೇಶದ ಪಶ್ಚಿಮ ಭಾಗದ 58 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಯುಪಿ ಸೇರಿದಂತೆ ಇತರೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶಗಳು ಮಾರ್ಚ್ 10 ರಂದು ಪ್ರಕಟಗೊಳ್ಳಲಿದೆ.

ABOUT THE AUTHOR

...view details