ಗಾಂಧಿನಗರ(ಗುಜರಾತ್):2022-23ನೇ ಶೈಕ್ಷಣಿಕ ವರ್ಷದಿಂದ ಗುಜರಾತಿನ ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದ್ದು, 6ರಿಂದ 12ನೇ ತರಗತಿ ಮಕ್ಕಳಿಗೆ ಭಗವದ್ಗೀತೆ ಬೋಧಿಸಲು ಆದೇಶಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಗುಜರಾತ್ನ ಶಿಕ್ಷಣ ಸಚಿವ ಜಿತು ವಘಾನಿ ಮಾಹಿತಿ ಹಂಚಿಕೊಂಡಿದ್ದು, 6ನೇ ತರಗತಿಯಿಂದ 12ನೇ ತರಗತಿವರೆಗೆ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಆದೇಶ ನೀಡಲಾಗಿದೆ ಎಂದರು.
ಭಗವದ್ಗೀತೆಯಲ್ಲಿನ ತತ್ವಗಳು ಮತ್ತು ಮೌಲ್ಯಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜೊತೆಗೆ, ಭಾರತೀಯ ಸಂಸ್ಕೃತಿ ಬಗ್ಗೆ ಮಕ್ಕಳಲ್ಲಿ ಜಾಗೃತಿ, ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿಯೂ ಸರ್ಕಾರ ಈ ಕ್ರಮ ಕೈಗೊಂಡಿರುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ:ನಾಳೆಯಿಂದ ಎರಡು ದಿನ ಜಮ್ಮು ಪ್ರವಾಸದಲ್ಲಿ ಅಮಿತ್ ಶಾ
ವಿದ್ಯಾರ್ಥಿಗಳ ಪಠ್ಯದಲ್ಲಿ ಭಗವದ್ಗೀತೆಯ ಆಯ್ದ ವಿಷಯಗಳ ಬಗ್ಗೆ ಕಥೆಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಭಗವದ್ಗೀತೆ ಮೇಲೆ ಭಾಷಣ, ಚರ್ಚಾ ಸ್ಪರ್ಧೆಗಳನ್ನೂ ಸಹ ಏರ್ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.