ಚಂಡೀಗಢ(ಪಂಜಾಬ್):ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ. ಇದೇ ಮಾರ್ಚ್ 16ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪದಗ್ರಹಣ ಮಾಡಲಿದ್ದಾರೆ. ಮುಖ್ಯಮಂತ್ರಿ ಆಗುವುದಕ್ಕೂ ಮೊದಲೇ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಪಂಜಾಬ್ನಲ್ಲಿ ಮಾಜಿ ಸಂಸದರು, ಮಾಜಿ ಸಚಿವರು, ಶಾಸಕರು ಸೇರಿದಂತೆ ವಿವಿಐಪಿಗಳಿಗೆ ನೀಡಿರುವ ಭದ್ರತೆಯನ್ನು ತಕ್ಷಣವೇ ಹಿಂಪಡೆದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ಬಾದಲ್ ಕುಟುಂಬ ಹೊರತುಪಡಿಸಿ, ಉಳಿದವರಿಗೆ ನೀಡಿರುವ ಭದ್ರತೆ ಹಿಂಪಡೆದುಕೊಳ್ಳಲು ಸೂಚಿಸಿದ್ದಾರೆ. ಭಗವಂತ್ ಮಾನ್ ಹೊರಡಿಸಿರುವ ಆದೇಶದ ಪ್ರಕಾರ ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಬಾದಲ್ ಕುಟುಂಬ ಹೊರತುಪಡಿಸಿ, ಮಾಜಿ ಸಿಎಂಗಳಾದ ಕ್ಯಾಪ್ಟನ್ ಅಮರೀಂದರ್ ಸಿಂಗ್, ಚರಣ್ಜಿತ್ ಸಿಂಗ್ ಚನ್ನಿ, ಮಾಜಿ ಸಚಿವರು, ಸಂಸದರು, ಶಾಸಕರು, ಕಾಂಗ್ರೆಸ್ ಹಾಗೂ ಅಕಾಲಿದಳದ ನಾಯಕರ ಭದ್ರತೆಯನ್ನು ಹಿಂಪಡೆದುಕೊಳ್ಳಲಾಗಿದೆ.