ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ಸೂಚಿಸಿದ್ದಾರೆ. ರಾಹುಲ್ ಗಾಂಧಿ #IStandWithFarmers(ನಾನು ರೈತರ ಪರ ನಿಲ್ಲುತ್ತೇನೆ) ಎಂಬ ಹ್ಯಾಷ್ಟ್ಯಾಗ್ನಡಿ ಟ್ವೀಟ್ ಮಾಡಿದ್ದಾರೆ.
ರೈತರು ನಡೆಸುತ್ತಿರುವ ಅಹಿಂಸಾತ್ಮಕ ಸತ್ಯಾಗ್ರಹ ಇಂದೂ ಕೂಡ ಅಖಂಡವಾಗಿದೆ. ಆದರೆ, ಈ ಸರ್ಕಾರ ಅದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರದ ಈ ಧೋರಣೆಯಿಂದಾಗಿಯೇ ಇಂದು ಭಾರತ್ ಬಂದ್ ನಡೆಸಬೇಕಾಯಿತು ಎಂದಿದ್ದಾರೆ.
ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು ಒಂದು ವರ್ಷದಿಂದಲೂ ಪ್ರತಿಭಟನೆ ನಡೆಸುತ್ತಿವೆ. ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ 11 ಸುತ್ತುಗಳ ಮಾತುಕತೆ ನಡೆದಿದ್ದು, ವಿಫಲವಾಗಿವೆ. ಈ ನಿಟ್ಟಿನಲ್ಲಿ ಇಂದು 40 ರೈತ ಒಕ್ಕೂಟಗಳ ಸಂಘಟನೆಯಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ (SKM) ಇಂದು 6 ರಿಂದ 4ಗಂಟೆಯವರೆಗೆ ಭಾರತ್ ಬಂದ್ಗೆ ಕರೆ ನೀಡಿದೆ.
ಇದನ್ನೂ ಓದಿ: ಬಂದ್ ಎಫೆಕ್ಟ್.. ದೆಹಲಿ - ನೋಯ್ಡಾ ಮಾರ್ಗದಲ್ಲಿ ವಾಹನ ಸಂಚಾರ ದಟ್ಟಣೆ, ಟ್ರಾಫಿಕ್ ಜಾಮ್: Video
ಕೃಷಿ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ಮೊದಲಿನಿಂದಲೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಬಂದಿದೆ. ಇಂದು ನಡೆಯುತ್ತಿರುವ ಭಾರತ್ ಬಂದ್ಗೂ ನಮ್ಮ ಬೆಂಬಲ ಇರುವುದಾಗಿ ಹೇಳಿಕೊಂಡಿದ್ದಾರೆ.