ನವದೆಹಲಿ:ವಿಶ್ವಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆಸ್ಪತ್ರೆಗಳಲ್ಲಿ ಎಲ್ಲ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಆದೇಶದಲ್ಲಿ ದೇಶೀಯ ಫಾರ್ಮಾ ಕಂಪನಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಎರಡು ಹನಿ ಮೂಗಿನ ಲಸಿಕೆಗೆ ಅನುಮೋದನೆ ನೀಡಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಪ್ರಸ್ತುತ ದೇಶವು ನಡೆಸುತ್ತಿರುವ ಲಸಿಕೆ ಕಾರ್ಯಕ್ರಮದಲ್ಲಿ ಶುಕ್ರವಾರದಿಂದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆ ಲಭ್ಯವಿರುತ್ತದೆ.
ಏನಿದು ಮೂಗಿನ ಲಸಿಕೆ?:ಈ ಲಸಿಕೆಯನ್ನು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದೆ. ಈ ರೀತಿಯ ಮೂಗಿನ ಲಸಿಕೆಗಳು ಪ್ರಸ್ತುತ ಅನೇಕ ದೇಶಗಳಲ್ಲಿ ಲಭ್ಯವಿದೆ. ಕಳೆದ ಸೆಪ್ಟೆಂಬರ್ನಲ್ಲಿ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ತುರ್ತು ಸಂದರ್ಭಗಳಲ್ಲಿ BBV-154 ಹೆಟೆರೊಲಾಜಸ್ ಅನ್ನು ಬೂಸ್ಟರ್ ಡೋಸ್ ಆಗಿ ಬಳಸಲು ಅನುಮತಿ ನೀಡಿತು. 18 ವರ್ಷಕ್ಕಿಂತ ಮೇಲ್ಪಟ್ಟ ಜನರು ಈ ಮೂಗಿನ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ತೆಗೆದುಕೊಳ್ಳಬಹುದು ಎಂದು ಸಿಡಿಎಸ್ಸಿಒ ಹೇಳಿತ್ತು. ಹೀಗಾಗಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಮೂಗಿನ ಲಸಿಕೆ ಇಂಕೋವಾಕ್ ಇಂಟ್ರಾನಾಸಲ್ ಅನ್ನು ಬೂಸ್ಟರ್ ಡೋಸ್ ಆಗಿ ತೆಗೆದುಕೊಳ್ಳಬಹುದಾಗಿದೆ.