ನವದೆಹಲಿ:ದಕ್ಷಿಣ ಆಫ್ರಿಕಾದಲ್ಲಿ ಕಳೆದ ವಾರ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರಿ 'ಒಮಿಕ್ರೋನ್' ವಿರುದ್ಧವೂ ಕೋವ್ಯಾಕ್ಸಿನ್ ಲಸಿಕೆ ಕೆಲಸ ಮಾಡುತ್ತದೆಯೇ ಎಂಬುದರ ಬಗ್ಗೆ ಅಧ್ಯಯನ ಮಾಡುತ್ತಿರುವುದಾಗಿ ಲಸಿಕೆ ತಯಾರಿಕಾ ಕಂಪನಿ ಭಾರತ್ ಬಯೋಟೆಕ್ ಮೂಲಗಳು ಈಟಿವಿ ಭಾರತಕ್ಕೆ ತಿಳಿಸಿವೆ.
ಒಮಿಕ್ರೋನ್ ರೂಪಾಂತರಿ ವಿಶ್ವದಾದ್ಯಂತ ಭೀತಿ ಮೂಡಿಸಿದ್ದು, ಹಲವು ದೇಶಗಳು ವೈರಸ್ ಹರಡದಂತೆ ಈಗಾಗಲೇ ಮುನ್ನೆಚ್ಚರಿಕೆ ವಹಿಸಿವೆ. ಇನ್ನು ಈ ವೈರಸ್ಗೆ ಕೋವಿಡ್ ಲಸಿಕೆಗಳು ಪರಿಣಾಮಕಾರಿಯಾಗುತ್ತದೆಯೇ ಎಂಬ ಅಧ್ಯಯನ ನಡೆದಿದೆ.
'ಸದ್ಯ ಇರುವ ಕೋವಿಡ್ ಲಸಿಕೆಗಳು ಈ ರೂಪಾಂತರಿ ವೈರಸ್ ವಿರುದ್ಧ ಅಷ್ಟು ಪರಿಣಾಮಕಾರಿ ಆಗದಿರಬಹುದು ಎಂದು ಔಷಧ ತಯಾರಿಕಾ ಕಂಪನಿಯ ಮೊಡೆರ್ನಾ ಸಿಇಒ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆ ಒಮಿಕ್ರೋನ್ಗೆ ಪರಿಣಾಮಕಾರಿಯಾಗುತ್ತದೆಯೇ ಎಂಬ ಬಗ್ಗೆ ಭಾರತ್ ಬಯೋಟೆಕ್ ಸಂಶೋಧನೆ ನಡೆಸಿದೆ.