ನವದೆಹಲಿ :ಕೋವಿಡ್ ವಿರುದ್ಧ ಕೋವಾಕ್ಸಿನ್ ಲಸಿಕಾ ತಯಾರಕ ಸಂಸ್ಥೆ ಭಾರತ್ ಬಯೋಟೆಕ್ ಕ್ಷಯರೋಗದ ವಿರುದ್ಧ ಲಸಿಕೆಯನ್ನು ಹೊರತರುವ ಚಿಂತನೆ ನಡೆಸಿದೆ. ಈ ಹಿನ್ನೆಲೆ ಶೀಘ್ರದಲ್ಲೇ ಸಂಸ್ಥೆಯು ತಂತ್ರಜ್ಞಾನಕ್ಕಾಗಿ ಮತ್ತೊಂದು ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದೆ.
ಪ್ರಧಾನಿ ನರೇಂದ್ರ ಮೋದಿಯವರು 2025ರ ಒಳಗೆ ಕ್ಷಯರೋಗ ನಿರ್ಮೂಲನೆಗಾಗಿ ಕಾರ್ಯಸೂಚಿಯನ್ನು ರೂಪಿಸಿದ್ದಾರೆ. ನಾವು ಅದೇ ದಿಕ್ಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಆದರೆ ನಮ್ಮಲ್ಲಿ ಟಿಬಿ ಲಸಿಕಾ ತಯಾರಿಕಾ ತಂತ್ರಜ್ಞಾನ ಇಲ್ಲದಿರುವುದರಿಂದ ಬೇರೆಯವರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುತ್ತಿದ್ದೇವೆ. ಆ ವಿಷಯದ ಬಗ್ಗೆ ನಾವು ಶೀಘ್ರದಲ್ಲೇ ಘೋಷಿಸುತ್ತೇವೆ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಹೇಳಿದ್ದಾರೆ.