ಬೋರ್ಗಾಂವ್(ಮಧ್ಯಪ್ರದೇಶ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಯಕತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಮಧ್ಯಪ್ರದೇಶದ ಬೋರ್ಗಾಂವ್‌ನಿಂದ ಇಂದು ಬೆಳಗ್ಗೆ ಪುನರಾರಂಭಗೊಂಡಿತು. ತಮಿಳುನಾಡಿನ ಕನ್ಯಾಕುಮಾರಿಯಿಂದ ಶುರುವಾದ ನಡಿಗೆ ಇಂದು 79ನೇ ದಿನಕ್ಕೆ ಕಾಲಿಟ್ಟಿದೆ. ಮುಂದಿನ ದಿನಗಳಲ್ಲಿ ಮಧ್ಯಪ್ರದೇಶದ 7 ಜಿಲ್ಲೆಗಳಲ್ಲಿ ಸಂಚರಿಸಲಿದೆ.
ನಿನ್ನೆಯಷ್ಟೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕ ಗಾಂಧಿ ವಾದ್ರಾ, ಪತಿ ರಾಬರ್ಟ್ ವಾದ್ರಾ ಹಾಗೂ ಮಗ ರೇಹನ್ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಜೊತೆಯಾಗಿದ್ದರು. ಇಂದು ಕೂಡ ಪ್ರಿಯಾಂಕ ಗಾಂಧಿ ಕುಟುಂಬ ಭಾರತ್ ಜೋಡೋದಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.