ಕರ್ನಾಟಕ

karnataka

ETV Bharat / bharat

ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ; ಓರ್ವ ಸಾವು - accident in Yamuna Expressway

ಬಸ್ಸೊಂದು ನೋಯ್ಡಾದಿಂದ ಆಗ್ರಾಕ್ಕೆ ಹೋಗುತ್ತಿದ್ದ ಸಂದರ್ಭ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿದ್ದು, ಓರ್ವ ದುರ್ಘಟನೆಯಲ್ಲಿ ಮೃತಪಟ್ಟಿದ್ದಾನೆ.

Yamuna Expressway
Yamuna Expressway

By

Published : Jan 14, 2021, 12:19 PM IST

ಮಥುರಾ(ಯುಪಿ):ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಬಸ್ಸೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ನಡೆದಿದೆ.

ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ

ಬಸ್ ನೋಯ್ಡಾದಿಂದ ಆಗ್ರಾಕ್ಕೆ ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಸುಮಾರು 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಕಡಿಮೆ ಗೋಚರತೆ ಇತ್ತು. ಈ ಸಂದರ್ಭ ಬಸ್ ಇನ್ನೊಂದು ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details