ಸಹರಾಂಪುರ (ಉತ್ತರ ಪ್ರದೇಶ): ಇಲ್ಲಿನ ಸಹಾರನ್ಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನಿತರ ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಓರ್ವನ ಬಂಧನ, ಉಳಿದವರಿಗಾಗಿ ಶೋಧ
ಉತ್ತರ ಪ್ರದೇಶದಲ್ಲಿ ಅಪ್ರಾಪ್ತೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಎಸ್ಪಿ (ನಗರ) ವಿನೀತ್ ಭಟ್ನಾಗರ್ ಹೇಳಿದ್ದಾರೆ.
ಸಹಾರನ್ಪುರ ಜಿಲ್ಲೆಯಲ್ಲಿ ನಾಲ್ಕು ಜನ ಯುವಕರು ಸೇರಿಕೊಂಡು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಬಾಲಕಿಯ ತಾಯಿ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.