ಜಮ್ಮು-ಕಾಶ್ಮೀರ:ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಸೇನೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಓರ್ವ ಭಾರತೀಯ ಯೋಧ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಓರ್ವ ಯೋಧ ಹುತಾತ್ಮ - ಕದನ ವಿರಾಮ ಉಲ್ಲಂಘನೆ
ಪೂಂಚ್ ಜಿಲ್ಲೆಯ ದಗ್ವಾರ್ ಸೆಕ್ಟರ್ನಲ್ಲಿ ಪಾಕಿಸ್ತಾನಿ ಸೇನೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಓರ್ವ ಭಾರತೀಯ ಯೋಧ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ.

ಕದನ ವಿರಾಮ ಉಲ್ಲಂಘನೆ
ಇಂದು ಮಧ್ಯಾಹ್ನ 3.45ಕ್ಕೆ ದಗ್ವಾರ್ ಸೆಕ್ಟರ್ನಲ್ಲಿ ಲಘು ಶಸ್ತ್ರಾಸ್ತ್ರಗಳನ್ನು ಹಾಗೂ ಶೆಲ್ ಬಳಸಿ ದಾಳಿ ಪಾಕ್ ಸೇನೆ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿದೆ. ಆದರೆ ಪ್ರತಿದಾಳಿಯಲ್ಲಿ ಪಾಕಿಸ್ತಾನದ ಸೈನಿಕರು ಸಾವುನೋವುಗಳು ಅನುಭವಿಸಿರುವ ಕುರಿತು ಮಾಹಿತಿ ತಿಳಿದಿಲ್ಲ ಎಂದು ಭಾರತೀಯ ಸೇನೆಯ ವಕ್ತಾರ ತಿಳಿಸಿದ್ದಾರೆ.
ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕ್ ಪಡೆ ದಾಳಿ ನಡೆಸುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಆದರೆ ದಾಳಿಯಲ್ಲಿ ಯಾವುದೇ ನಾಗರಿಕರು ಮೃತಪಟ್ಟಿರುವುದಾಗಿ ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.