ಒಡಿಶಾ :ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಎಲ್ಲ ಕೆಲಸಗಳನ್ನು ಬಿಟ್ಟು, ಒಡಿಶಾದಲ್ಲಿ ಚಂಡಮಾರುತ
ಒಡಿಶಾಕ್ಕೆ ಸಾವಿರ ಕೋಟಿ ಪರಿಹಾರ ಘೋಷಿಸಿದ ಕೇಂದ್ರ: ಪ್ರಧಾನಿ ವೈಮಾನಿಕ ಸಮೀಕ್ಷೆ - pm modi
ಫಣಿ ಚಂಡಮಾರುತದಿಂದ ತತ್ತರಿಸಿದ್ದ ಒಡಿಶಾಕ್ಕೆ ಪ್ರಧಾನಿ ನೆರವಿನ ಹಸ್ತ ಚಾಚಿದ್ದಾರೆ. ಚಂಡಮಾರುತ ಪೀಡಿತ ಒಡಿಶಾಕ್ಕೆ ಪ್ರಧಾನಿ ಇಂದು ಭೇಟಿ ನೀಡಿ ಖುದ್ದು ಪರಿಸ್ಥಿತಿಯ ಪರಿಶೀಲನೆ ನಡೆಸಿದರು.
ಒಡಿಶಾದಲ್ಲಿ ನಡೆದಿರುವ ಫನಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಒಡಿಶಾ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಬಂಧ ಉತ್ತಮವಾಗಿದೆ. ಇನ್ನು ಫನಿಯಿಂದಾಗಿ ಅವಘಡ್ಕಕೀಡಾದ ಜನರಿಗೆ ಸರ್ಕಾರದಿಂದ ಎಲ್ಲಾ ಸವಲತ್ತುಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿಂದೆ ಒಡಿಶಾಕ್ಕೆ 381 ಕೋಟಿ ಪರಿಹಾರ ಹಣವನ್ನು ನೀಡಿದ್ದ ಕೇಂದ್ರ ಸರ್ಕಾರ ಇದೀಗ 1000 ಕೋಟಿ ಹಣವನ್ನು ಬಿಡುಗಡೆ ಮಾಡಿದೆ ಎಂದು ನರೇಂದ್ರ ಮೋದಿ ತಿಳಿಸಿದರು.
ಇನ್ನು ಒಡಿಶಾದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ನಂತರ ಯಾವ ಭಾಗದಲ್ಲಿ ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು. ಆದ್ರೆ ರಾಜ್ಯ ಸರ್ಕಾರದ ಅಧಿಕಾರಿಗಳು ಚುನಾವಣಾ ಕೆಲಸದಲ್ಲಿರುವುದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ರಾಷ್ಟ್ರೀಯ ಸುದ್ಧಿ ಸಂಸ್ಥೆಯೊಂದು ತಿಳಿಸಿದೆ.
TAGGED:
pm modi