ನವದೆಹಲಿ:ವಿಶೇಷ ಸಾಂವಿಧಾನಿಕ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕೇಂದ್ರಾಡಳಿತ ಪ್ರದೇಶ ಜಮ್ಮುಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಸೈನಿಕರ ನಿಯೋಜನೆ ಮಾಡಲಾಗಿತ್ತು. ಆದರೆ ಇದೀಗ ಮಹತ್ವದ ಬೆಳವಣಿಗೆಯೊಂದರಲ್ಲಿ ಬರೋಬ್ಬರಿ 12 ಸಾವಿರ ಸೈನಿಕರನ್ನು ಹಿಂಪಡೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೇಂದ್ರ ಗೃಹ ಸಚಿವಾಲಯ ಈ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಸೈನಿಕರನ್ನು ಹಿಂಡೆದುಕೊಳ್ಳುವುದಾಗಿ ಘೋಷಿಸಿದೆ. ಭಾರತೀಯ ಸೇನೆ, ಅರೆಸೇನಾ ಪಡೆ, ಸಶಸ್ತ್ರ ಸೀಮಾ ಬಲ ಹಾಗೂ ಸಿಎಪಿಎಫ್‌ನ ಅನೇಕ ಭದ್ರತಾ ಸಿಬ್ಬಂದಿಯನ್ನು ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಜಮಾವಣೆ ಮಾಡಲಾಗಿತು.