ಚಂಡೀಗಢ (ಹರಿಯಾಣ) :ನವದೆಹಲಿಯ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 107 ವಿದೇಶಿ ಪ್ರಜೆಗಳನ್ನು ಸೋಮವಾರ ಜೈಲಿಗೆ ಕಳುಹಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಮಾರ್ಚ್ 12 ರಿಂದ 15ರ ವರೆಗೆ ನವದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ನೇಪಾಳ, ಫಿಲಿಪ್ಪೀನ್ಸ್, ಶ್ರೀಲಂಕಾ, ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ತಾಯ್ಲೆಂಡ್ ಮೂಲದವರನ್ನು ಜೈಲಿಗೆ ಕಳುಹಿಸಲಾಗಿದೆ. ಕಾನೂನಿನ ಪ್ರಕಾರ ಶಿಕ್ಷೆಯ ಅವಧಿ ಮುಗಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.