ಹೈದರಾಬಾದ್: ದೇಶಾದ್ಯಂತ ಕೊರೊನಾ ವೈರಸ್ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ.
ತೆಲಂಗಾಣ 10ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್... ಪರೀಕ್ಷೆ ಇಲ್ಲದೆಯೇ ಪಾಸ್!
ದೇಶಾದ್ಯಂತ ಕೊರೊನಾ ವೈರಸ್ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
KCR
ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ನಿರ್ಧರಿಸಿದ್ದಾಗಿ ಇಲ್ಲಿನ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಸಿನಿಮಾ, ಟಿವಿ ಶೂಟಿಂಗ್ ಮಾಡಲು ಅನುಮತಿ ನೀಡಲಾಗಿದ್ದು, ಕಡಿಮೆ ಸಿಬ್ಬಂದಿಗಳೊಂದಿಗೆ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಯಮದೊಂದಿಗೆ ಚಿತ್ರೀಕರಣ ಆರಂಭಿಸಬಹುದು ಎಂದು ಕೆಸಿಆರ್ ತಿಳಿಸಿದ್ದಾರೆ.
Last Updated : Jun 8, 2020, 6:34 PM IST