ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಂಕುರಾ, ಪುರ್ಬಾ ಬರ್ಧಮಾನ್ ಮತ್ತು ಹೌರಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಒಂದೇ ದಿನ 11 ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಿಡಿಲಿಗೆ 11 ಮಂದಿ ಬಲಿ! - ಸಿಡಿಲು
ಸಿಡಿಲಿನ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಿಡಿಲಿಗೆ 11 ಜನರು ಬಲಿ
ಬಂಕುರಾ ಹಾಗೂ ಪುರ್ಬಾ ಬರ್ಧಮಾನ್ನಲ್ಲಿ ತಲಾ ಐವರು ಸಾವನ್ನಪ್ಪಿದ್ದಾರೆ. ಹೌರಾ ಜಿಲ್ಲೆಯಲ್ಲಿ 50 ವರ್ಷದ ರೈತನೋರ್ವ ಮರದ ಕೆಳಗಡೆ ನಿಂತಿದ್ದಾಗ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಗಾಳದ ದಕ್ಷಿಣ ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.