ಕರ್ನಾಟಕ

karnataka

ETV Bharat / bharat

ಎಲ್ಲರಿಗೂ ಆಹಾರಧಾನ್ಯ ವಿತರಣೆ: ಪಾಸ್ವಾನ್

ಕೇಂದ್ರ ಸರ್ಕಾರದ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿ ಆಹಾರ ಧಾನ್ಯಗಳನ್ನು ಎಲ್ಲರಿಗೂ ವಿತರಿಸಲಾಗುತ್ತದೆ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

By

Published : Aug 8, 2020, 9:03 AM IST

fdff
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್

ನವದೆಹಲಿ: ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿ ಎರಡನೇ ಹಂತದ ಜುಲೈ ಕೋಟಾದಲ್ಲಿ ಶೇ. 62ರಷ್ಟು ಆಹಾರಧಾನ್ಯ ವಿತರಿಸಲಾಗಿದೆ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

ಆದರೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜುಲೈನಲ್ಲಿ ಆಹಾರ ಧಾನ್ಯಗಳ ಉಚಿತ ವಿತರಣೆಯನ್ನು ಇನ್ನೂ ಪ್ರಾರಂಭಿಸಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. 81 ಕೋಟಿ ಫಲಾನುಭವಿಗಳಿಗೆ ಒಟ್ಟು 201 ಲಕ್ಷ ಟನ್ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶುಕ್ರವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಸ್ವಾನ್, ಜುಲೈನಲ್ಲಿ ಒಟ್ಟು 24.94 ಲಕ್ಷ ಟನ್ ಅಂದರೆ ಶೇ62 ರಷ್ಟು ಆಹಾರ ಧಾನ್ಯಗಳನ್ನು 49.87 ಕೋಟಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಹೇಳಿದರು.

ABOUT THE AUTHOR

...view details