ಕರ್ನಾಟಕ

karnataka

ETV Bharat / bharat

ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ! - ಪುಲ್ವಾಮಾ ಗ್ರೆನೇಡ್ ದಾಳಿ

ಉಗ್ರರು ಭದ್ರತಾ ಪಡೆ ಸಿಬ್ಬಂದಿ ಇದ್ದ ತಂಡವನ್ನು ಗುರಿಯಾಗಿಸಿಕೊಂಡು ಗ್ರೆನೇಡ್​ ದಾಳಿ ನಡೆಸಿದರು. ಆದರೆ, ಗ್ರೆನೇಡ್ ಗುರಿ ತಪ್ಪಿ ರಸ್ತೆಯಲ್ಲಿ ಸ್ಫೋಟಗೊಂಡಿದೆ.

Pulwama
ಪುಲ್ವಾಮಾ

By

Published : Nov 18, 2020, 8:45 PM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಪುಲ್ವಾಮಾದ ಕಾಕಪೋರಾ ಚೌಕ್ ಬಳಿ ಭಯೋತ್ಪಾದಕರು ಗ್ರೆನೇಡ್​ಗಳನ್ನು ಎಸೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಯೋತ್ಪಾದಕರು ಭದ್ರತಾ ಪಡೆ ಸಿಬ್ಬಂದಿ ಇದ್ದ ತಂಡವನ್ನು ಗುರಿಯಾಗಿಸಿಕೊಂಡಿದ್ದರು. ಆದರೆ ಗ್ರೆನೇಡ್ ಗುರಿ ತಪ್ಪಿ ರಸ್ತೆಯಲ್ಲಿ ಸ್ಫೋಟಗೊಂಡಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯಾವುದೇ ಸಿಬ್ಬಂದಿಗೆ ಗಾಯವಾಗಿಲ್ಲ ಎಂದು ಹೇಳಿದ್ದಾರೆ.

ABOUT THE AUTHOR

...view details