ಕರ್ನಾಟಕ

karnataka

ETV Bharat / bharat

ಅಪ್ರಾಪ್ತ ಸಹೋದರ ಸಂಬಂಧಿಗಳಿಂದ 5 ತಿಂಗಳು ಅತ್ಯಾಚಾರ: 12 ವರ್ಷದ ಬಾಲಕಿ ಈಗ 4 ತಿಂಗಳ ಗರ್ಭಿಣಿ! - 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬಾಲಕಿ ಮೇಲೆ ತನ್ನ ಅಪ್ರಾಪ್ತ ಸಹೋದರ ಸಂಬಂಧಿಗಳು ಐದು ತಿಂಗಳ ಕಾಲ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

12-year-old girl pregnant after rape
ಸಹೋದರ ಸಂಬಂಧಿಗಳಿಂದ 5 ತಿಂಗಳು ಅತ್ಯಾಚಾರ

By

Published : Oct 10, 2020, 7:31 AM IST

ನವಸಾರಿ (ಗುಜರಾತ್):ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಎರಡು ಪ್ರಕರಣಗಳು ವರದಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲ ಘಟನೆಯಲ್ಲಿ ನವಸಾರಿ ಜಿಲ್ಲೆಯಲ್ಲಿ ಐದು ತಿಂಗಳ ಅವಧಿಯಲ್ಲಿ ಮೂವರು ಅಪ್ರಾಪ್ತ ಸಹೋದರ ಸಂಬಂಧಿಗಳಿಂದ ಅತ್ಯಾಚಾರಕ್ಕೊಳಗಾದ 12 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ನವಸಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಮೋರಿ ತಿಳಿಸಿದ್ದಾರೆ.

ಜಿಲ್ಲೆಯ ಮತ್ತೊಂದು ಘಟನೆಯಲ್ಲಿ, 13 ವರ್ಷದ ಬಾಲಕಿಯನ್ನು ಅಕ್ಟೋಬರ್ 3ರಂದು ತನ್ನ ಸಹೋದರ ಸಂಬಂಧಿ ಸ್ನೇಹಿತ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು ಬಾಲಕಿಯ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ.

"ಮೊದಲ ಘಟನೆಯಲ್ಲಿ, ಅಪ್ರಾಪ್ತೆ ಮನೆಯಲ್ಲಿ ಒಬ್ಬಳೇ ಇದ್ದಾಗ ಅವಳ ಸಹೋದರ ಸಂಬಂಧಿಯೊಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದಾಳೆ. ಅವನು ಈ ವಿಷಯವನ್ನು ಇತರ ಇಬ್ಬರು ಸಹೋದರ ಸಂಬಂಧಿಗಳಿಗೆ ತಿಳಿಸಿದ್ದಾನೆ. ಬಾಲಕಿಗೆ ಬೆದರಿಕೆ ಹಾಕಿದ ಅಪ್ರಾಪ್ತರು ಅತ್ಯಾಚಾರ ನಡೆಸಿದ್ದಾರೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆಯಲ್ಲಿ, ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ವೈದ್ಯರು ತಾಯಿಗೆ ತಿಳಿಸಿದ್ದಾರೆ. ನಂತರ ಬಾಲಕಿ ಈ ಘಟನೆಯನ್ನು ತಾಯಿಗೆ ತಿಳಿಸಿದ್ದಾಳೆ" ಎಂದು ಪೊಲೀಸರು ಹೇಳಿದ್ದಾರೆ.

ಎರಡನೇ ಘಟನೆಯಲ್ಲಿ, 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೃತ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.

ABOUT THE AUTHOR

...view details