ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪಶ್ಚಿಮ ದೆಹಲಿಯ ಪಶ್ಚಿಮ್ ವಿಹಾರ್ ಪ್ರದೇಶದ ಬಾಲಕಿ ಒಬ್ಬಂಟಿಯಾಗಿದ್ದ ವೇಳೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಳಿಕ, ಆಕೆಯ ಮುಖ ಮತ್ತು ತಲೆಗೆ ಕತ್ತರಿಯಿಂದ ಗಾಯಗೊಳಿಸಿದ್ದು, ಕೊಲೆ ಮಾಡುವ ಪ್ರಯತ್ನವನ್ನೂ ನಡೆಸಿದ್ದ.
ಬಾಲಕಿಗೆ ಶಸ್ತ್ರಚಿಕಿತ್ಸೆ:
ಬಾಲಕಿಗೆ ಏಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಆಸ್ಪತ್ರೆಗೆ ಭೇಟಿ ನೀಡಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಸಂತ್ರಸ್ತೆಯ ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ 10 ಲಕ್ಷ ರೂ ಪರಿಹಾರ ಧನ ಘೋಷಣೆ ಮಾಡಿದ್ದರು. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆಯ ಭರವಸೆಯನ್ನೂ ಅವರು ನೀಡಿದ್ದರು.