ಮುಜಾಫರ್ನಗರ: ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ನೆರೆಮನೆ ಕಾಮುಕ - 12 ವರ್ಷದ ಬಾಲಕಿ
ಅಪ್ರಾಪ್ತೆಯ ಮೇಲೆ ಕಾಮುಕ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
ಕಳೆದ ಸೋಮವಾರ ಈ ಘಟನೆ ನಡೆದಿದ್ದು, ಪೋಷಕರು ಹೊರಗಡೆ ಹೋಗಿದ್ದ ವೇಳೆ ಮನೆಗೆ ನುಗ್ಗಿರುವ ಪಕ್ಕದ ಮನೆಯ ವ್ಯಕ್ತಿ ಕೃತ್ಯವೆಸಗಿ ತದನಂತರ ತಲೆಮರೆಸಿಕೊಂಡಿದ್ದಾನೆ. ಕತ್ವಾಲಿ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಕರೀಂ ಎಂದು ಗುರುತಿಸಲಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮನೆಯಿಂದ ಹೊರಗಡೆ ಹೋಗಿದ್ದ ಪೋಷಕರು ವಾಪಸ್ ಬರುತ್ತಿದ್ದಂತೆ ಘಟನೆ ಬಗ್ಗೆ ಬಾಲಕಿ ಹೇಳಿದ್ದಾಳೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ.