ಮುಂಬೈ:ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 1233 ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 34 ಜನ ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.
ಒಂದೇ ದಿನ ಮಹಾರಾಷ್ಟ್ರದಲ್ಲಿ 1,233 ಪಾಸಿಟಿವ್ ಕೇಸ್, 34 ಸಾವು! - ಮಹಾರಾಷ್ಟ್ರ ಕೊರೊನಾ ಸುದ್ದಿ
ದೇಶದಲ್ಲೇ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಅಪಾಯಕಾರಿ ಸನ್ನಿವೇಶ ರಾಜ್ಯದಲ್ಲಿ ನಿರ್ಮಾಣವಾಗಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 1233 ಹೊಸ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಕೊರೊನಾ
ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 16,758ಕ್ಕೇರಿದ್ದು, ರಾಜ್ಯದಲ್ಲಿ ಈವರೆಗೆ 651 ಜನ ಸೋಂಕಿಗೆ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ದೇಶದಲ್ಲೇ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಅಪಾಯಕಾರಿ ಸನ್ನಿವೇಶ ರಾಜ್ಯದಲ್ಲಿ ನಿರ್ಮಾಣವಾಗಿದೆ.