ರಾಯಗಢ(ಮಹಾರಾಷ್ಟ್ರ): ಸೋಮವಾರ ಸಂಜೆ ರಾಯಗಢ ಜಿಲ್ಲೆಯ ಮಹಾದ್ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು, ಸ್ಥಳದಲ್ಲಿ ಕಳೆದ 24 ಗಂಟೆಗಳಿಂದ ಭರದ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇಲ್ಲಿಯವರೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿಕೆಯಾಗಿದೆ. ಇನ್ನು ಅನೇಕರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಇಲ್ಲಿಯವರೆಗೆ 60ಕ್ಕೂ ಹೆಚ್ಚು ಜನರ ರಕ್ಷಣೆ ಮಾಡಲಾಗಿದೆ. ಈ ಕಟ್ಟಡದಲ್ಲಿ ಸುಮಾರು 60ಕ್ಕೂ ಕುಟುಂಬಗಳು ವಾಸವಾಗಿದ್ದವು.