ಭಿಲ್ವಾರ (ರಾಜಸ್ಥಾನ):ನಗರದ ಭದದಾ ಬಾಗ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ ವರ ಸೇರಿ 13 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ನಿಯಮ ಮೀರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ 50ಕ್ಕೂ ಹೆಚ್ಚೂ ಜನರ ವಿರುದ್ಧ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ರಾಜೇಂದ್ರ ಭಟ್ ಸೂಚಿಸಿದ್ದಾರೆ.
ರಾಜ್ಯದಲ್ಲಿ ಮೊದಲ ಕೊರೊನಾ ಪ್ರಕರಣ ಭಿಲ್ವಾರ ನಗರದಲ್ಲಿ ಪತ್ತೆಯಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆಯಾದ ಬಳಿಕ ನಗರದಲ್ಲಿ ಸೋಂಕಿತರ ಸಂಖ್ಯೆ 237 ಆಗಿದೆ.
ನಿಯಮದ ಪ್ರಕಾರ 50 ಜನರಿಗೆ ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಆದರೆ, ಕೆಲವೊಂದು ಮದುವೆಗಳಲ್ಲಿ ನಿಯಮ ಮೀರಿ 500 ಜನ ಸೇರುತ್ತಿದ್ದಾರೆ. ಭದದಾ ಬಾಗ್ ಮದುವೆ ಸಮಾರಂಭದಲ್ಲಿ ಭಾಗವಹಿಸಿದ 13 ಜನರಿಗೆ ಸೋಂಕು ತಗುಲಿದ ಬಳಿಕ ಜಿಲ್ಲಾಡಳಿತ ಮತ್ತು ವೈದ್ಯಕೀಯ ಇಲಾಖೆ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಜಿಲ್ಲಾಧಿಕಾರಿ ಈಗಾಗಲೇ ಎಲ್ಲ ಉಪವಿಭಾಗಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಮಾರ್ಗ ಸೂಚಿಗಳನ್ನು ಪಾಲಿಸದೇ ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಬಾರದು, ಯಾರಾದರೂ ನಿಯಮ ಉಲ್ಲಂಘಿಸಿದ್ದು ಕಂಡು ಬಂದರೆ, ಅವರ ವಿರುದ್ಧ ಕಠಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.