ಅಲಿಗಢ: ಕೊರೊನಾ ವೈರಸ್ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇಬ್ಬರು ಶ್ರೀಲಂಕಾ ಪ್ರಜೆಗಳು ಸೇರಿದಂತೆ 13 ತಬ್ಲಿಘಿ ಜಮಾತ್ ಸದಸ್ಯರನ್ನು ಬಂಧಿಸಲಾಗಿದೆ. ಇವರು ಸ್ಥಳೀಯ ಮಸೀದಿಯೊಂದರಲ್ಲಿ ಅಡಗಿ ಕುಳಿತಿದ್ದರು ಎಂದು ತಿಳಿದು ಬಂದಿದೆ.
ಬಂಧಿತ 13 ರಲ್ಲಿ 11 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಇಬ್ಬರು ಶ್ರೀಲಂಕಾ ಪ್ರಜೆಗಳನ್ನು ಜೈಲಿಗೆ ಕಳುಹಿಸಲಾಗಿದೆ. ಶ್ರೀಲಂಕಾ ಪ್ರಜೆಗಳ ಬಂಧನ ಕುರಿತಂತೆ ದೆಹಲಿಯಲ್ಲಿರುವ ಶ್ರೀಲಂಕಾ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.