ಸೀತಾಪುರ(ಉತ್ತರ ಪ್ರದೇಶ): ಸೀತಾಪುರ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿದ್ದು, ಇತರ ನಾಲ್ವರು ಈ ದುಷ್ಕೃತ್ಯವನ್ನು ವಿಡಿಯೋ ಮಾಡಿರುವ ಘಟನೆ ಬುಧವಾರ ನಡೆದಿದೆ.
ಅತ್ಯಾಚಾರಕ್ಕಿಲ್ಲ ಲಾಕ್ಡೌನ್... 13 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ರೆಕಾರ್ಡ್ ಮಾಡಿದ ಕಾಮುಕರು - ಪೊಲೀಸ್ ವರಿಷ್ಠಾಧಿಕಾರಿ ಎಲ್ ಆರ್ ಕುಮಾರ್
ಶೌಚದಿಂದ ಮರಳುತ್ತಿದ್ದ 13 ವರ್ಷದ ಬಾಲಕಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿದ್ದು, ಇತರ ನಾಲ್ವರು ಈ ದುಷ್ಕೃತ್ಯವನ್ನು ವಿಡಿಯೋ ಮಾಡಿರುವ ಘಟನೆ ಬುಧವಾರ ನಡೆದಿದೆ.
ಜಿಲ್ಲೆಯ ಮಿಸ್ರಿಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯಾಹ್ನ 2.00ರ ಸುಮಾರಿಗೆ ಈ ಘಟನೆ ನಡೆದಿದ್ದು, ಸದ್ಯ 6 ಯುವಕರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. 13 ವರ್ಷದ ಬಾಲಕಿ ಶೌಚಕ್ಕೆ ತೆರಳಿ ಮನೆಗೆ ಹಿಂದಿರುಗುತ್ತಿದ್ದಾಗ ಆರು ಯುವಕರು ಬಲವಂತವಾಗಿ ಶಾಲಾ ಕಟ್ಟಡಕ್ಕೆ ಎಳೆದೊಯ್ದು ಅಪರಾಧ ಎಸಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಲ್. ಆರ್. ಕುಮಾರ್ ಹೇಳಿದ್ದಾರೆ.
ಘಟನೆಯ ಬಗ್ಗೆ ಯಾರಿಗೂ ಹೇಳಕೂಡದು ಎಂದು ಬಾಲಕಿಯನ್ನು ಬೆದರಿಸಿ ಕಳಿಸಿದ್ದಾರೆ. ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಹೇಳಿದರು.