ಕರ್ನಾಟಕ

karnataka

ETV Bharat / bharat

ಅರಳುವ ಮುನ್ನವೇ ಬಾಡಿದ ಮೊಗ್ಗುಗಳು! ಮಿದುಳು ರೋಗಕ್ಕೆ 14 ಮಕ್ಕಳು ಬಲಿ -

ಶ್ರೀಕೃಷ್ಣ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಕ್ಯುಟ್ ಎನ್‌ಸೆಫಾಲಿಟಿಸ್ ಸಿಂಡ್ರೋಮ್ ಸಂಬಂಧಿತ ರೋಗದಿಂದ ಬಳಲುತ್ತಿದ್ದ 38 ಮಂದಿ ದಾಖಲಾಗಿದ್ದರು. ಇದರಲ್ಲಿ 14 ಮಕ್ಕಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು

By

Published : Jun 8, 2019, 9:52 PM IST

ಮುಜಫರ್ ನಗರ್‌​(ಬಿಹಾರ್​) :ಅಕ್ಯುಟ್ ಎನ್‌ಸೆಫಾಲಿಟಿಸ್ ಸಿಂಡ್ರೋಮ್ (ಎಇಎಸ್) ಎಂಬ ಮಿದುಳು ಸಂಬಂಧಿ ರೋಗಕ್ಕೆ 14 ಮಕ್ಕಳು ಸಾವನ್ನಪ್ಪಿದ ಘಟನೆ ಬಿಹಾರದ ಮುಜಫರ್‌ ನಗರದಲ್ಲಿ ಸಂಭವಿಸಿದೆ.

ಇಲ್ಲಿನ ಶ್ರೀಕೃಷ್ಣ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎಸ್​ಕೆಎಂಸಿಎಚ್​) ಅಕ್ಯುಟ್ ಎನ್‌ಸೆಫಾಲಿಟಿಸ್ ಸಿಂಡ್ರೋಮ್ ಸಂಬಂಧಿತ ರೋಗದಿಂದ ಬಳಲುತ್ತಿದ್ದ 38 ರೋಗಿಗಳು ದಾಖಲಾಗಿದ್ದರು. ಇದರಲ್ಲಿ 14 ಮಕ್ಕಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಎಸ್​ಕೆಎಂಸಿಎಚ್​ ಅಧೀಕ್ಷಕ ಮಾತನಾಡಿ, ಮಿದುಳು ಸಂಬಂಧಿ ರೋಗ ಉಲ್ಬಣಿಸಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 38 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.ರೋಗ ತೀವ್ರತೆ ಹೆಚ್ಚಾಗಿ 14 ಮಕ್ಕಳು ಮೃತಪಟ್ಟಿದ್ದಾರೆ. ಕೆಲವು ರೋಗಿಗಳಲ್ಲಿ ಜ್ವರದ ತೀವ್ರತೆ ಅಧಿಕವಾಗುತ್ತಿದ್ದು, ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

2012ರ ಜೂನ್​ನಲ್ಲಿ ಅಕ್ಯುಟ್ ಎನ್‌ಸೆಫಾಲಿಟಿಸ್ ಸಿಂಡ್ರೋಮ್ ಪಾಟ್ನಾದಲ್ಲಿ ಉಲ್ಬಣಿಸಿ ಮೂರೇ ದಿನದಲ್ಲಿ 109ಕ್ಕೂ ಅಧಿಕ ಮಕ್ಕಳನ್ನು ಬಲಿ ತೆಗೆದುಕೊಂಡಿತ್ತು. ರೋಗ ವ್ಯಾಪಿಸಿರುವ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು ಕಟ್ಟೆಚ್ಚರ ವಹಿಸಲಾಗಿದೆ.

For All Latest Updates

TAGGED:

ABOUT THE AUTHOR

...view details