ಚೆನ್ನೈ(ತಮಿಳುನಾಡು): ಲಾಕ್ಡೌನ್ ವೇಳೆ ಅಪ್ರಾಪ್ತ ಮಗಳ ಮೇಲೆ ಕಾಮುಕ ತಂದೆಯೋರ್ವ ನಿರಂತರವಾಗಿ ಅತ್ಯಾಚಾರಗೈದಿದ್ದು, ಆಕೆ ಗರ್ಭಿಣಿಯಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.
ಈ ಅಮಾನವೀಯ ಘಟನೆ ತಮಿಳುನಾಡಿನ ನಾಗಪಟ್ಟಣಂದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂಥೆ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಗೊತ್ತಾಗುತ್ತಿದ್ದಂತೆ ಬಾಲಕಿ ತಾಯಿ ದೂರು ನೀಡಿದ್ದು, ಈಗಾಗಲೇ ಪೊಲೀಸರು ಕಾಮುಕ ತಂದೆಯ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.