ಹೈದರಾಬಾದ್:ಲಾಕ್ಡೌನ್ನಿಂದ ಅನ್ಯ ಮಾರ್ಗವಿಲ್ಲದೇ ಕಾಲ್ನಡಿಗೆ ಮೂಲಕ ತಮ್ಮ ಊರುಗಳಿಗೆ ತೆರಳುತ್ತಿರುವ ವಲಸೆ ಕಾರ್ಮಿಕರು ರಸ್ತೆ ಅಪಘಾತಕ್ಕೆ ಒಳಗಾಗುತ್ತಿದ್ದಾರೆ.
ವಲಸೆ ಬಂದಿರುವ ಕೂಲಿ ಕಾರ್ಮಿಕರುಕೊರೊನಾ ಪ್ರೇರಿತ ಲಾಕ್ಡೌನ್ನಿಂದಾಗಿ ಆಯಾ ಪ್ರಾಂತ್ಯಗಳಲ್ಲೇ ಸಿಲುಕಿಕೊಂಡು ನರಕ ಅನುಭವಿಸುತ್ತಿದ್ದಾರೆ. ದುಡಿಯಲು ಕೆಲಸವಿಲ್ಲ, ಕೈಯಲ್ಲಿ ಕಾಸಿಲ್ಲ. ಹೀಗಾಗಿ ತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಹೀಗಾಗಿ ತವರಿನತ್ತ ಹೆಜ್ಜೆ ಹಾಕುತ್ತಿದ್ದಾರೆ. ಆದರೆ, ವಿಧಿಯಾಟ ಮಾರ್ಗ ಮಧ್ಯದಲ್ಲೇ ಅಸುನೀಗುತ್ತಿದ್ದಾರೆ.