ಕರ್ನಾಟಕ

karnataka

ETV Bharat / bharat

ಕೊರೊನಾಗೆ ನಲುಗಿದ ಮಹಾರಾಷ್ಟ್ರ: ಒಂದೇ ದಿನದಲ್ಲಿ 145 ಸೋಂಕಿತರು ಪತ್ತೆ - corona deaths

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ನಿನ್ನೆಯ ಅಂಕಿ ಅಂಶಗಳಂತೆ 145 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ, ಇಂದು ಓರ್ವ ಮಹಿಳೆ ಸೋಂಕಿಗೆ ಸಾವನ್ನಪ್ಪಿದ್ದಾಳೆ

ಕೊರೊನಾ
corona

By

Published : Apr 5, 2020, 10:49 AM IST

ಮುಂಬೈ: ಮಹಾರಾಷ್ಟ್ರದಲ್ಲಿ ನಿನ್ನೆ 145 ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಟ್ಟು 33 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮುಂಬೈ ನಗರದಲ್ಲೇ ನಾಲ್ವರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇಲ್ಲಿಯರೆಗೂ 52 ಮಂದಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದ ಇತರೆಡೆಗಳಲ್ಲೂ ಕೂಡಾ ಕೊರೊನಾ ತೀವ್ರವಾಗಿ ಹರಡುತ್ತಿದೆ. ಸಾಂಗ್ಲಿ, ನಾಗ್ಪುರ, ಅಹಮದ್​ನಗರ, ಯವತ್ಮಾಲ್​, ಸತಾರಾ, ಔರಂಗಾಬಾದ್ ಮುಂತಾದ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಮಹಾರಾಷ್ಟ್ರದಲ್ಲಿ 2,849 ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಮನೆ ಮನೆಗೆ ತೆರಳಿ ಜನರಿಗೆ ಸೋಂಕು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮನವರಿಕೆ ಮಾಡುತ್ತಿವೆ.

ABOUT THE AUTHOR

...view details